ಭರತ ಭೂಮಿ ನನ್ನ ತಾಯಿ (ರಚನೆ – ಕುವೆಂಪು)

ಭರತ ಭೂಮಿ ನನ್ನ ತಾಯಿ
ನನ್ನ ಪೊರೆವ ತೊಟ್ಟಿಲು
ಜೀವನವನೆ ದೇವಿಗೆರೆವೆ
ಬಿಡುತೆ ಗುಡಿಯ ಕಟ್ಟಲು || ಪ ||

ತುಹಿನ ಗಿರಿಯ ಸಿರಿಯ ಮುಡಿಯ
ಹಿರಿಯ ಕಡಲು ತೊಳೆಯುವಡಿಯ
ಪೈರು ಪಚ್ಚೆ ಪಸುರಿನುಡೆಯ || ಅ.ಪ ||

ಸಿಂಧು ಯಮುನೆ ದೇವ ಗಂಗೆ
ತಪತಿ ಕೃಷ್ಣೆ ಭದ್ರೆ ತುಂಗೆ
ಸಲಿಲ ತೀರ್ಥ ಪುಣ್ಯ ರಂಗೆ || 1 ||

ಮತದ ಬಿರುಕುಗಳನು ತೊರೆವೆ
ನುಡಿಗಳೊಡಕುಗಳನು ಮರೆವೆ
ತೊತ್ತ ತೊಡಕುಗಳನು ಬಿರಿವೆ
ಸ್ವಾತಂತ್ರ್ಯದ ಸ್ವರ್ಗಕೇರೆ
ಪುಣ್ಯದೇಣಿ ಮೆಟ್ಟಿಲು || 2 ||

Leave a Reply

Your email address will not be published. Required fields are marked *