ಮಾತೆಪೂಜಕ ನಾನು ಎನ್ನಯ ಶಿರವನಿಡುವೆನು ಅಡಿಯಲಿ
ನಿನ್ನ ಕೀರ್ತಿಯು ಜಗದಿ ಮೆರೆಯಲಿ ಒಂದೆ ಆಸೆಯು ಮನದಲಿ || ಪ ||
ಎಡರು ತೊಡರುಗಳೆಲ್ಲ ತುಳಿಯುತ ಮುಂದೆ ನುಗ್ಗುವೆ ಭರದಲಿ
ನಿನ್ನ ನಾಮ ನಿನಾದವಾಗಲಿ ಶ್ರಮಿಪೆ ನಾ ಪ್ರತಿ ಕ್ಷಣದಲಿ
ನಿನ್ನ ಗೌರವಕೆದುರು ಬರುವ ಬಲವ ಮುರಿವೆನು ಛಲದಲಿ
ಜಗದ ಜನನಿ ಭಾರತ ಇದ ಕೇಳಿ ನಲಿಯುವೆ ಮನದಲಿ || 1 ||
ನಗುತ ನಲಿಯುವ ನಿನ್ನ ವದನವ ನೋಡಿ ನಲಿವುದು ಎನ್ನೆದೆ
ನಿನ್ನ ದುಃಖಿತ ವದನವೀಕ್ಷಿಸೆ ಸಿಡಿವುದೆನ್ನಯ ಹೃದಯವು
ನಿನ್ನ ಮುಖದಲಿ ಗೆಲವು ತರಲು ನೀರುಗೈಯುವೆ ರಕ್ತವ
ಎನ್ನ ಕಣಕಣ ತೇದು ಬಸಿಯುವೆ ಪೂರ್ಣ ಜೀವನಶಕ್ತಿಯ || 2 ||
ನಿನ್ನ ತೇಜವ ಜಗವು ನೋಡಲಿ ಉರಿವೆ ದೀಪದ ತೆರದಲಿ
ಎನ್ನ ಶಕ್ತಿಯ ಘೃತವ ಸತತವು ಎರೆಯುತಿರುವೆನು ಭರದಲಿ
ಮಾತೃಮಂದಿರ ಬೆಳಗುತಿರಲಿ ನಾನೇ ನಂದಾ ದೀವಿಗೆ
ಬತ್ತಿ ತೆರದೀ ದೇಹ ಉರಿಯಲಿ ಸಾರ್ಥಕತೆ ಈ ಬಾಳಿಗೆ || 3 ||
ರುದ್ರನಾಗಿ ವಿರೋಧಿ ವಿಷವನು ಭರದಿ ನಾನದ ನುಂಗುವೆ
ಜಗವ ಮೆಚ್ಚಿಸಿ ಅದರ ಹೃದಯವ ನಿನ್ನೆಡೆಗೆ ನಾ ಸೆಳೆಯುವೆ
ಸೃಜಿಪೆ ಜಗದಲಿ ನಿನ್ನ ಪೂಜಿಪ ಕೋಟಿ ಕೋಟಿ ಭಕ್ತರ
ಕೀರ್ತಿ ಶಿಖರದಿ ಮಾತೆ ಮಂಡಿಸು ಅರ್ಪಿಸುವೆ ನಾ ಸರ್ವವಾ || 4 ||
It’s so useful for us
It’s my favourite song.